Featured

ದರ್ಶನ್​ ಪರ ವಕೀಲರಾಗಿ ಫೇಮಸ್​ ಕ್ರಿಮಿನಲ್​ ಲಾಯರ್​​ ಸಿ.ವಿ ನಾಗೇಶ್​ ನೇಮಕ – vishwanews24

ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ

ದರ್ಶನ್ ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ.

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ. ಒಬ್ಬ ಆರೋಪಿಯ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶವೂ ಇದೆ. ಅಥವಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಿವಿ ನಾಗೇಶ್ ಅವರ ಸಹಾಯಕ ವಕೀಲರಾಗಿರುವ ರಾಘವೇಂದ್ರ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ನಟ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಜಾಮೀನು ಅರ್ಜಿಯನ್ನು ಹಾಕಲು ಸಕಲ ತಯಾರಿ ನಡೆಸಿರುವುದಾಗಿ ತಿಳಿಸಿದ್ದು, ಅದಕ್ಕೆ ಬೇಕಿರುವ ಅಗತ್ಯ ಮಾಹಿತಿಯನ್ನು ದರ್ಶನ್ ಅವರಿಂದ ಪಡೆದುಕೊಂಡಿದ್ದಾರೆ. ರಿಮ್ಯಾಂಡ್ ಶೀಟ್ ಇನ್ನಿತರೆಗಳನ್ನು ಪೊಲೀಸರಿಂದ ಪಡೆದುಕೊಂಡಿದ್ದು, ಜೂನ್ 22 ರಂದೇ ಸಿವಿ ನಾಗೇಶ್ ಅವರು ತಮ್ಮ ವಾದ ಮಂಡಿಸಲಿದ್ದಾರೆ.

ಸಿವಿ ನಾಗೇಶ್ ಅವರು ಹೈಕೋರ್ಟ್​ನ ಹಿರಿಯ ವಕೀಲರಾಗಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಜೈಲು ಪಾಲಾದಾಗಿದ್ದಾಗ ಅವರ ಪರ ವಾದ ಮಂಡಿಸಿ ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ದೊರಕಿಸಿದರು. ಭವಾನಿ ರೇವಣ್ಣ ಜೈಲು ಪಾಲಾಗದಂತೆ ತಡೆಯುವಲ್ಲಿಯೂ ನಾಗೇಶ್ ಅವರ ಪಾತ್ರವಿದೆ ಎನ್ನಲಾಗುತ್ತಿದೆ. ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಮೊಹಮ್ಮದ್ ನಲಪಾಡ್ ಪರವಾಗಿಯೂ ನಾಗೇಶ್ ಅವರೇ ವಾದ ಮಂಡಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago