ದರ್ಶನ್ ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ.
ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ. ಒಬ್ಬ ಆರೋಪಿಯ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶವೂ ಇದೆ. ಅಥವಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಸಿವಿ ನಾಗೇಶ್ ಅವರ ಸಹಾಯಕ ವಕೀಲರಾಗಿರುವ ರಾಘವೇಂದ್ರ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ನಟ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಜಾಮೀನು ಅರ್ಜಿಯನ್ನು ಹಾಕಲು ಸಕಲ ತಯಾರಿ ನಡೆಸಿರುವುದಾಗಿ ತಿಳಿಸಿದ್ದು, ಅದಕ್ಕೆ ಬೇಕಿರುವ ಅಗತ್ಯ ಮಾಹಿತಿಯನ್ನು ದರ್ಶನ್ ಅವರಿಂದ ಪಡೆದುಕೊಂಡಿದ್ದಾರೆ. ರಿಮ್ಯಾಂಡ್ ಶೀಟ್ ಇನ್ನಿತರೆಗಳನ್ನು ಪೊಲೀಸರಿಂದ ಪಡೆದುಕೊಂಡಿದ್ದು, ಜೂನ್ 22 ರಂದೇ ಸಿವಿ ನಾಗೇಶ್ ಅವರು ತಮ್ಮ ವಾದ ಮಂಡಿಸಲಿದ್ದಾರೆ.
ಸಿವಿ ನಾಗೇಶ್ ಅವರು ಹೈಕೋರ್ಟ್ನ ಹಿರಿಯ ವಕೀಲರಾಗಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಅಪಹರಣ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಜೈಲು ಪಾಲಾದಾಗಿದ್ದಾಗ ಅವರ ಪರ ವಾದ ಮಂಡಿಸಿ ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ದೊರಕಿಸಿದರು. ಭವಾನಿ ರೇವಣ್ಣ ಜೈಲು ಪಾಲಾಗದಂತೆ ತಡೆಯುವಲ್ಲಿಯೂ ನಾಗೇಶ್ ಅವರ ಪಾತ್ರವಿದೆ ಎನ್ನಲಾಗುತ್ತಿದೆ. ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಮೊಹಮ್ಮದ್ ನಲಪಾಡ್ ಪರವಾಗಿಯೂ ನಾಗೇಶ್ ಅವರೇ ವಾದ ಮಂಡಿಸಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…