Featured

ದರ್ಶನ್ ಪ್ರಕರಣ : ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ, ಅದರ ಅವಶ್ಯಕತೆ ಯಾರಿಗೂ ಇಲ್ಲ: ಪರಮೇಶ್ವರ್ ಸ್ಪಷ್ಟನೆ – vishwanews24

ಡಿ ಗ್ಯಾಂಗ್ ಕೊಲೆ ಪ್ರಕರಣ : ನಾನು, ಸಿಎಂ ಯಾರಿಗೂ ಸೊಪ್ಪು ಹಾಕಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂದರು.

ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂದರು.

ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

1 hour ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

1 hour ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

21 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

23 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

23 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

23 hours ago