ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟರೊಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಸ್ವಾಮಿ (33) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯನ್ನು ಈಗ ಕೊಡುವುದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಆರೋಪದಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರ ಹತ್ಯೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಗಳಲ್ಲಿ ತಿಳಿದುಬಂದಿದೆ. ಸದ್ಯ ದರ್ಶನ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…