ನವದೆಹಲಿ: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಅನುಮೋದಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರ ವ್ಯಕ್ತಿಗೆ ಪೂಜೆಗಳನ್ನು ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ವಾದಿಸಿದರು. ದೇವಸ್ಥಾನದ ಒಳಗೆ ಪೂಜೆ ಮಾಡುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ. ಇದು ಸಂಪೂರ್ಣವಾಗಿ ರಾಜಕೀಯ. ಧಾರ್ಮಿಕ ಚಟುವಟಿಕೆಗಾಗಿ ಅವರನ್ನು ದೇವಸ್ಥಾನದ ಒಳಗೆ ಕರೆತರಲು ಯಾವುದೇ ಕಾರಣವಿಲ್ಲ ಎಂದು ವಾದ ಮಂಡಿಸಿದರು.
ದಸರಾ ಉದ್ಘಾಟನೆಗೆ ಆಹ್ವಾನಿತರಾದವರು ಹಿಂದೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅಂತಹವರನ್ನು ಆಹ್ವಾನಿಸಿರುವುದು ಸರಿಯಲ್ಲ ಎಂದು ಪಿ.ಬಿ.ಸುರೇಶ್ ವಾದಿಸಿದರು. ವಾದದ ಸಂದರ್ಭದಲ್ಲೇ ನ್ಯಾಯಮೂರ್ತಿ ನಾಥ್ ಅವರು, ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…