Featured

ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು – vishwanews24

ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು

ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಸೆ. 30ರಂದು ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.

ಸೆ.26ರಂದು ಮತ್ತು ಸೆ.28ರಂದು ಎಸ್‌ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್‌ಎಂವಿಬಿ ತಲುಪಲಿದೆ.

22 ಗಂಟೆಗಳಲ್ಲಿ ಸ್ಲೀಪರ್ ಕೋಚ್ ಬುಕ್!

ಬೆಂಗಳೂರು – ಮಂಗಳೂರು ನಡುವಿನ ದಸರಾ ವಿಶೇಷ ರೈಲಿಗೆ ರೈಲು ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. 22 ಗಂಟೆಗಳಲ್ಲಿ ಸ್ಲೀಪರ್ ಕೋಚ್‌ನ ಎಲ್ಲಾ ಸೀಟುಗಳು ಬುಕ್ ಆಗಿದೆ. ಹಬ್ಬದ ಸಮಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಶೇಷ ರೈಲಿನ ಅಗತ್ಯವಿರುವುದು ಸಾಬೀತಾಗಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

7 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

11 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

12 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

12 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

12 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

13 hours ago