ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.
ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.
ಸಿಎಎ ಜಾರಿಯಾದ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆ ನಡೆದಿದೆ. ಅಂದು ಪಿಸ್ತೂಲ್ ಹಿಡಿದು ತಿರುಗಿದ್ದರು, ನಿನ್ನೆ ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಿದೆ. ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ.
ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…