ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಜೋಡಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ -Vishwanews24

Featured, ರಾಜ್ಯ ನ್ಯೂಸ್, ಸಿನಿಮಾ

ಮೈಸೂರು: ಕನ್ನಡ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 5’ರಲ್ಲಿ ಆರಂಭವಾದ ‘ಪ್ರೀತಿ’ ಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರಿನ ಹಿನಕಲ್‍ನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಬಿಗ್‍ಬಾಸ್ ಜೋಡಿ ಮದುವೆ ನಡೆದಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮದುವೆ ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ನಡೆದಿದೆ. ಬೆಳಗ್ಗೆ 8.15 ರಿಂದ 9 ಗಂಟೆಗೆ ಧಾರಾ ಮುಹೂರ್ತವಿತ್ತು. ಮೀನ ಲಗ್ನದಲ್ಲಿ ನಿವೇದಿತಾಳನ್ನು ಚಂದನ್ ಶೆಟ್ಟಿ ವರಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಧಾರಾಮುಹೂರ್ತದಲ್ಲಿ ನಿವೇದಿತಾ ಗೌಡಗೆ, ಚಂದನ್ ಶೆಟ್ಟಿ ಮಾಂಗಲ್ಯ ಕಟ್ಟಿದ್ದಾರೆ. ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ನಿನ್ನೆ ಈ ಜೋಡಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಅಶ್ವಿನಿ ಪುನೀತ್, ಧ್ರುವ ಸರ್ಜಾ, ಪ್ರೇರಣಾ ಶಂಕರ್, ನಿರ್ದೇಶಕ ಚೇತನ್ ಕುಮಾರ್, ಶೈನ್ ಶೆಟ್ಟಿ, ಶ್ರೇಯಸ್ ಮಂಜು, ನಿರ್ದೇಶಕ ರಘು ಶಾಸ್ತ್ರಿ, ನಿರೂಪಕ ಅಕುಲ್ ಬಾಲಾಜಿ ಮುಂತಾದವರು ನವಜೋಡಿಗೆ ಹಾರೈಸಿದ್ದಾರೆ.