ಮೈಸೂರು: ಕನ್ನಡ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 5’ರಲ್ಲಿ ಆರಂಭವಾದ ‘ಪ್ರೀತಿ’ ಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ಹಿನಕಲ್‍ನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಬಿಗ್‍ಬಾಸ್ ಜೋಡಿ ಮದುವೆ ನಡೆದಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮದುವೆ ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ನಡೆದಿದೆ. ಬೆಳಗ್ಗೆ 8.15 ರಿಂದ 9 ಗಂಟೆಗೆ ಧಾರಾ ಮುಹೂರ್ತವಿತ್ತು. ಮೀನ ಲಗ್ನದಲ್ಲಿ ನಿವೇದಿತಾಳನ್ನು ಚಂದನ್ ಶೆಟ್ಟಿ ವರಿಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಧಾರಾಮುಹೂರ್ತದಲ್ಲಿ ನಿವೇದಿತಾ ಗೌಡಗೆ, ಚಂದನ್ ಶೆಟ್ಟಿ ಮಾಂಗಲ್ಯ ಕಟ್ಟಿದ್ದಾರೆ. ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ಮದುವೆ ಶಾಸ್ತ್ರಗಳು ನಡೆಯುತ್ತಿವೆ. ನಿನ್ನೆ ಈ ಜೋಡಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಅಶ್ವಿನಿ ಪುನೀತ್, ಧ್ರುವ ಸರ್ಜಾ, ಪ್ರೇರಣಾ ಶಂಕರ್, ನಿರ್ದೇಶಕ ಚೇತನ್ ಕುಮಾರ್, ಶೈನ್ ಶೆಟ್ಟಿ, ಶ್ರೇಯಸ್ ಮಂಜು, ನಿರ್ದೇಶಕ ರಘು ಶಾಸ್ತ್ರಿ, ನಿರೂಪಕ ಅಕುಲ್ ಬಾಲಾಜಿ ಮುಂತಾದವರು ನವಜೋಡಿಗೆ ಹಾರೈಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…