ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕತ್ರಿನಾ ಕೈಫ್-ವಿಕ್ಕಿ ಕೌಶಲ್ ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ – Vishwanews24

Featured, ರಾಷ್ಟ್ರ ನ್ಯೂಸ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕತ್ರಿನಾ ಕೈಫ್-ವಿಕ್ಕಿ ಕೌಶಲ್ ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ – Vishwanews24

ಮುಂಬೈ: ಬಾಲಿವುಡ್‍ನಲ್ಲಿ ಮದುವೆ ವಿಚಾರವಾಗಿ ಸಂಚಲನ ಮೂಡಿಸಿದ್ದ ಕತ್ರಿನಾ ಕೈಫ್- ವಿಕ್ಕಿ ಕೌಶಲ್ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‍ನಲ್ಲಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆ ನೆರವೇರಿದೆ. ಡಿ.9ರಂದು ಈ ಜೋಡಿ ಹಸೆಮಣೆ ಏರಿದೆ. ಮದುವೆ ಬಳಿಕ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕರೆತಂದವರಿಗೆ ಪ್ರೀತಿಯ ಮತ್ತು ಕೃತಜ್ಞತೆ. ನಾವು ಒಟ್ಟಿಗೆ ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದವನ್ನು ಬಯಸುತ್ತೇವೆ ಎಂದು ಬರೆದುಕೊಂಡು ಮದುವೆಯ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್‍ನ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕವಾಗಿ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿಗೆ ಶುಭಾಶಯಗಳ ಸುರಿಮಳೆ ಗೈದಿದ್ದಾರೆ

ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಭೇಟಿ – Vishwanews24