ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಪ್ರೇಯಸಿ ಧನಶ್ರೀ ವರ್ಮಾ ಜೊತೆಗೆ ಗುರುಗ್ರಾಮ್‌ನಲ್ಲಿ ಡಿಸೆಂಬರ್ 22ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಗ್ರಾಮ್‌ನ ಕರ್ಮ ಲೇಕ್ ರೆಸಾರ್ಟ್‌ನಲ್ಲಿ ಆಪ್ತ ವಲಯದ ಸಮ್ಮುಖದಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ.
ಮದುವೆ ಕಾರ್ಯಕ್ರಮದ ಫೋಟೋಗಳನ್ನು ಯುಜುವೇಂದ್ರ ಚಾಹಲ್ ಹಾಗೂ ಧನಶ್ರೀ ವರ್ಮಾ ಇಬ್ಬರೂ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳೂ ವೈರಲ್ ಆಗುತ್ತಿದೆ. ನವ ದಂಪತಿಗಳಿಗೆ ಅಭಿಮಾನಿಗಳು ಶುಭಾಶಯಗಳನ್ನು ಸುರಿಮಳೆ ಹರಿಸುತ್ತಿದ್ದಾರೆ.
ಧನಶ್ರೀ ವರ್ಮಾ ಡಾನ್ಸ್ ಕೊರಿಯೋಗ್ರಾಫರ್ ಆಗಿ ಖ್ಯಾತರಾಗಿದ್ದು ಲಾಕ್‌ಡೌನ್ ಸಂದರ್ಭದಲ್ಲಿ ಈ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಈಗ ಮದುವೆಯ ಹಂತಕ್ಕೆ ತಲುಪಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಟಿಕ್‌ಟಾಕ್‌ನಲ್ಲಿ ನೃತ್ಯಗಳನ್ನು ಮಾಡುತ್ತಾ ಚಾಹಲ್ ಖ್ಯಾತರಾಗಿದ್ದರು.
ಯುಜವೇಂದ್ರ ಚಾಹಲ್ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ಭಾಗವಾಗಿದ್ದರು. ಸೀಮಿತ ಓವರ್‌ಗಳ ಸರಣಿ ಅಂತ್ಯವಾದ ಬಳಿಕ ಚಾಹಲ್ ಭಾರತಕ್ಕೆ ಮರಳಿದ್ದು ಮದುವೆಯ ಸಿದ್ಧತೆಯನ್ನು ನಡೆಸಿದ್ದರು. ಮಂಗಳವಾರದಂದು ಚಾಹಲ್ ಹಾಗೂ ಧನಶ್ರೀ ಮದುವೆಯ ಬಂಧನಕ್ಕೆ ಒಳಗಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…