ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಐಂದ್ರಿತಾ – ದಿಗಂತ್..
ಬೆಂಗಳೂರು: ಕಳೆದ 8 ವರ್ಷಗಳಿಂದ ಮನಸಾರೆ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೇ ಮತ್ತು ದೂದ್ ಪೇಡ ದಿಗಂತ್ ಮದುವೆ ಕೊನೆಗೂ ಫಿಕ್ಸ್ ಆಗಿದೆ. ಇದುವರೆಗೂ ಪ್ರೇಮಿಗಳಾಗಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಬಗ್ಗೆ ಬಹಿರಂಗವಾಗಿ ಜೋಡಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ತಮ್ಮ ಮದುವೆಯ ಬಗ್ಗೆ ಹೇಳಿಕೊಂಡಿದ್ದಾರೆ.
ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ವತಃ ಐಂದ್ರಿತಾ ಅವರೇ, “ನನ್ನ ಬೆಸ್ಟ್ ಫ್ರೆಂಡ್ ನನ್ನು ಮದುವೆಯಾಗುತ್ತಿರುವುದಕ್ಕೆ ತುಂಬಾ ಉತ್ಸುಕಳಾಗಿದ್ದೇನೆ” ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.
2009 ರಲ್ಲಿ ಮನಸಾರೆ ಚಿತ್ರದಲ್ಲಿ ಜೋಡಿಯಾಗಿ ನಟಿಸುವ ವೇಳೆ ಇಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು. ಇನ್ನು ಈ ಕ್ಯೂಟ್ ಜೋಡಿ ತಮ್ಮ ವಿವಾಹ ಡಿಸೆಂಬರ್ 11 ಮತ್ತು 12 ರಂದು ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ..
