Featured

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಐಂದ್ರಿತಾ – ದಿಗಂತ್..

ಬೆಂಗಳೂರು: ಕಳೆದ 8 ವರ್ಷಗಳಿಂದ ಮನಸಾರೆ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೇ ಮತ್ತು ದೂದ್ ಪೇಡ ದಿಗಂತ್ ಮದುವೆ ಕೊನೆಗೂ ಫಿಕ್ಸ್ ಆಗಿದೆ. ಇದುವರೆಗೂ ಪ್ರೇಮಿಗಳಾಗಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಬಗ್ಗೆ ಬಹಿರಂಗವಾಗಿ ಜೋಡಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ತಮ್ಮ ಮದುವೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ವತಃ ಐಂದ್ರಿತಾ ಅವರೇ, “ನನ್ನ ಬೆಸ್ಟ್ ಫ್ರೆಂಡ್ ನನ್ನು ಮದುವೆಯಾಗುತ್ತಿರುವುದಕ್ಕೆ ತುಂಬಾ ಉತ್ಸುಕಳಾಗಿದ್ದೇನೆ” ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.

2009 ರಲ್ಲಿ ಮನಸಾರೆ ಚಿತ್ರದಲ್ಲಿ ಜೋಡಿಯಾಗಿ ನಟಿಸುವ ವೇಳೆ ಇಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು. ಇನ್ನು ಈ ಕ್ಯೂಟ್ ಜೋಡಿ ತಮ್ಮ ವಿವಾಹ ಡಿಸೆಂಬರ್ 11 ಮತ್ತು 12 ರಂದು ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ..

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

26 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

51 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

60 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago