ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ಹೇಳಿದ ಮೂರು ಸ್ಫೋಟಕ ಒಗಟುಗಳು ಎಲ್ಲ ಸತ್ಯವಾಗಿದೆ ಎಂದು ಉದ್ಯಮಿ, ಸಿನಿ ವಿತರಕ ಪ್ರಶಾಂತ್ ಸಂಬರಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸಿಸಿಬಿ ಪೊಲೀಸರಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂದು ಬೆಳಗ್ಗೆ 10 ಗಂಟೆಗೆ ನಾನು ಸಿಸಿಬಿ ಕಚೇರಿಗೆ ತೆರಳಿ ನನ್ನಲ್ಲಿರುವ ಪ್ರಮುಖ ಸಾಕ್ಷ್ಯಗಳನ್ನು ನೀಡುತ್ತೇನೆ. ನಾನು ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿಯಲ್ಲ. ನಾನು ಈ ಹಿಂದೆ ಹೇಳಿದ ಎಲ್ಲ ಒಗಟುಗಳು ಸತ್ಯವಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಮುಂಬೈಗೆ ಸೊಸೆಯಾಗಿ ಒಬ್ಬರು ತೆರಳಿರುವ ಕುಟುಂಬದ ವ್ಯಕ್ತಿಯ ಬಗ್ಗೆ ಹೇಳಿದ್ದೆ. ಇದು ನಿಜವಾಗಿದ್ದು ಜೀವರಾಜ್ ಆಳ್ವಾ ಮಗ ಆದಿತ್ಯಾ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆ ಮಗಳು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ಮದುವೆಯಾಗಿದ್ದಾರೆ. ಸುಶಾಂತ್ ಸಿಂಗ್ ಪ್ರಕರಣಕ್ಕೂ ಬೆಂಗಳೂರಿಗೂ ಸಂಬಂಧ ಇದೆ ಎಂದು ತಿಳಿಸಿದ್ದು ಅದು ಕೂಡ ನಿಜವಾಗಿದ್ದು ಎನ್‌ಸಿಬಿಯಿಂದ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಕೇಶವ್ ಮೂರ್ತಿ ಮಗನಿಗೆ ನೋಟಿಸ್ ಬಂದಿದೆ ಎಂದು ಹೇಳಿದರು.
ಡ್ರಗ್ಸ್ ದಂಧೆಯಲ್ಲಿ ಬಾಲಿವುಡ್‌ಗೂ ಸ್ಯಾಂಡಲ್‌ವುಡ್‌ಗೂ ಸಂಬಂಧ ಇದೆ. ಅದರಲ್ಲಿ ಇಮ್ತಿಯಾಸ್ ಖಾತ್ರಿ ಇದ್ದಾನೆ ಅಂತ ಹೇಳಿದ್ದೆ. ಅದು ಕೂಡ ನಿಜವಾಗಿದೆ. ನಾನು ಮಾಡಿದ ಎಲ್ಲಒಗಟುಗಳು ನಿಜವಾಗಿದ್ದು ಇನ್ನು ಎರಡು ಒಗಟುಗಳು ಶೀಘ್ರವೇ ಸ್ಫೋಟಗೊಳ್ಳಲಿದೆ ಎಂದು ಹೇಳಿದರು.
ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ನಾನು ಸಂಜನಾ ಜೊತೆಯಲ್ಲೇ ಜಮೀರ್ ಶ್ರೀಲಂಕಾಗೆ ಹೋಗಿದ್ದಾರೆ ಎಂದು ಹೇಳಿಲ್ಲ. ಆದರೆ 2019ರ ಜೂನ್ 8, 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್‌ಪೋರ್ಟ್ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸವಾಲು ಎಸೆದರು.
ತನ್ನ ಬಗ್ಗೆ ಬಂದಿರುವ ಬಿಜೆಪಿ ಏಜೆಂಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ನಾನು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ಅವರ ಕನ್ನಡ ಪರ ನಿಲುವು ನನಗೆ ಬಹಳ ಇಷ್ಟವಾಗಿತ್ತು. ಅವರ ಕೆಳಗಡೆ ಕುಳಿತಿದ್ದ ಫೋಟೋ ಫೇಸ್‌ಬುಕ್‌ನಲ್ಲಿ ಹಾಕಿದ್ದೆ. ಕುಮಾರಸ್ವಾಮಿಯವರ ಜೊತೆಯಲ್ಲೂ ನಾನು ಮಾತನಾಡಿದ್ದೇನೆ. ನಾನು ಯಾರ ಏಜೆಂಟ್ ಅಲ್ಲ. ನಾನೊಬ್ಬ ಕನ್ನಡಿಗ. ಕನ್ನಡಕ್ಕಾಗಿ ಹೋರಾಡುವ ವ್ಯಕ್ತಿ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…