Featured

ದಾಖಲೆ ಬರೆದ ಸ.ಹಿ.ಪ್ರಾ.ಶಾ ಕಾಸರಗೋಡು ;ಅಮೆರಿಕ ಯುಎಸ್‍ನಲ್ಲಿ ಭರ್ಜರಿ ಪ್ರದರ್ಶನ

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ ಈ ಚಿತ್ರ ಕರ್ನಾಟಕ ಮಾತ್ರವಲ್ಲದೇ ಅಮೆರಿಕದಲ್ಲೂ ಯಶಸ್ವಿ ಕಾಣುತ್ತಿದೆ.

ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿ “ಕನ್ನಡ ಚಿತ್ರ ಅಮೆರಿಕಾದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ. ಅಮೆರಿಕದ ಕೆಲವು ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ಟೈಟಲ್ ಹಾಗೂ ಸ್ಕೋರ್ಸ್ ನಿಂದಲೇ ಸೆ. 29ರ ವರೆಗೂ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ 85,509 ಡಾಲರ್(62.04 ಲಕ್ಷ ರೂ.) ಕಲೆಕ್ಷನ್ ಆಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಿಮ್ಮ ಈ ಟ್ವೀಟ್ ನಮಗೆ ತುಂಬಾ ಪ್ರೇರಣೆ ನೀಡಿದೆ. ನಿಮ್ಮ ಅಪ್‍ಡೇಟ್‍ಗೆ ಧನ್ಯವಾದಗಳು” ಎಂದು ಬರೆದು ನಿರ್ದೇಶಕ ಎಂದು ರಿಷಬ್ ಶೆಟ್ಟಿ ತರಣ್ ಅದರ್ಶ್ ಅವರ ಟ್ವೀಟ್ ನ್ನು ರೀ-ಟ್ವೀಟ್ ಮಾಡಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ ಒಂದು ಹೊಸ ದಾಖಲೆ ಬರೆದಿದೆ. ಮೊಟ್ಟ ಮೊದಲ ಬಾರಿಗೆ ಅಂಡಮಾನ್ ಹಾಗೂ ನಿಕೋಬಾರ್ ನಲ್ಲಿ ಈ ಚಿತ್ರ ಪ್ರದರ್ಶನವಾಗಿ ದಾಖಲೆ ಬರೆದಿದೆ. ಕರ್ನಾಟಕದಲ್ಲಿ ಈ ಚಿತ್ರ ಯಶಸ್ಸು ಕಂಡು ಬೇರೆ ರಾಜ್ಯ ಹಾಗೂ ಬೇರೆ ದೇಶದಲ್ಲಿ ಯಶಸ್ಸು ಕಂಡಿದೆ. ಸೆ. 29 ಹಾಗೂ 30 ರಂದು ಫೋರ್ಟ್‍ಬ್ಲೇರ್ ನ ದಿವ್ಯಂ ಟಾಕೀಸಿನಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago