ಬೆಂಗಳೂರು: ದಿತ್ವಾ ಚಂಡಮಾರುತ ತಮಿಳುನಾಡು-ಪುದುಚೇರಿ ಕರಾವಳಿ ಸಮೀಪದಲ್ಲಿ ದುರ್ಬಲಗೊಂಡಿದ್ದರೂ ಕೂಡಾ ಕರ್ನಾಟಕದ ಹಲವು ಕರಾವಳಿ ಪ್ರದೇಶದಲ್ಲಿ ಮುನ್ನೆಚ್ಚರಿಕೆಯಾಗಿ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಉದ್ಯಾನನಗರಿಯಲ್ಲಿ ಶೀತಗಾಳಿ ಮುಂದುವರಿದಿದ್ದು, ಇನ್ನುಳಿದಂತೆ ದಿತ್ವಾ ಚಂಡಮಾರುತದ ಪರಿಣಾಮ ದಕ್ಷಿಣ ಒಳನಾಡು ಜಿಲ್ಲೆ ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳು: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ
ದಕ್ಷಿಣ ಒಳನಾಡು ಜಿಲ್ಲೆಗಳು: ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಹಾಸನ.
ಸೆಂಟ್ರಲ್ ಜಿಲ್ಲೆಗಳು: ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ
ಡಿಸೆಂಬರ್ 5 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ನಂತರ ರಾಜ್ಯಾದ್ಯಂತ ಒಣ ಹವಾಮಾನ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…