Featured

ದಿನಕ್ಕೆ ಕನಿಷ್ಟ 5 ಸಾವಿರ LPG ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ  – vishwanews24

ದಿನಕ್ಕೆ ಕನಿಷ್ಟ 5 ಸಾವಿರ ಎಲ್‍ಪಿಜಿ ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ

ಬೆಂಗಳೂರು : ಸರಕಾರವು ರಾಜ್ಯದ ಎಲ್ಲ ಹೋಟೆಲ್‍ಗಳಿಗೆ ಕೇವಲ ಒಂದು ಸಾವಿರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳನ್ನು ಮಾತ್ರ ಪೂರೈಕೆ ಮಾಡಲಾಗುವುದು ಹೇಳಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಮತ್ತಷ್ಟ ಸಂಕಷ್ಟ ಉಂಟಾಗುತ್ತದೆ. ಹೀಗಾಗಿ ದಿನಕ್ಕೆ ಕನಿಷ್ಟ 5 ಸಾವಿರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಬೇಕು ಎಂದು ಹೋಟೆಲ್ ಮಾಲಕರ ಸಂಘ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಸುಬ್ರಮಣ್ಯ ಹೊಳ್ಳ, ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೇವಲ ಐದು ದಿನಗಳಲ್ಲಿ 100 ಕೋಟಿ ರೂ.ಗೂ ಅಧಿಕ ನಷ್ಟವನ್ನು ಅನುಭವಿಸಿದೆ ಎಂದು ಹೇಳಿದರು.

ಇದನ್ನೂ ಓದಿ : 

ರಾಜ್ಯದಲ್ಲಿರುವ ಎಲ್ಲ ಹೋಟೆಲ್‍ಗಳಿಗೆ ಪ್ರತಿನಿತ್ಯ ಸುಮಾರು 40 ಸಾವಿರಕ್ಕೂ ಅಧಿಕ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈಗ ಕೇವಲ ಒಂದು ಸಾವಿರ ಸಿಲಿಂಡರ್‌ ಗಳನ್ನು ಪೂರೈಕೆ ಮಾಡಲಾಗುತ್ತದೆ ಎಂದು ಸರಕಾರ ಹೇಳಿದ್ದು, ಇದರಿಂದ ಉದ್ಯಮಕ್ಕೆ ನಷ್ಟವಾಗುತ್ತದೆ. ಈಗಾಗಲೇ ಎಲ್‍ಪಿಜಿ ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್‍ಗಳಲ್ಲಿ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಹೀಗಾಗಿ ಸರಕಾರವು ಹೋಟೆಲ್ ಉದ್ಯಮಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ :

ನಮ್ಮ ಸಂಘಟನೆಯ ವ್ಯಾಪ್ತಿಯಲ್ಲಿರುವ ಹೋಟೆಲ್‍ಗಳನ್ನು ಇದುವರೆಗೆ ಬಂದ್ ಮಾಡಿಲ್ಲ. ಸಾಧ್ಯವಾಗುವ ಮಟ್ಟಿಗೆ ವಿದ್ಯುತ್ ಒಲೆ, ಸೌದೆಯನ್ನು ಬಳಕೆ ಮಾಡಿ, ಅಡುಗೆಯನ್ನು ಮಾಡಲಾಗುತ್ತಿದೆ. ಇನ್ನು ಮುಂದೆಯೂ ಹೋಟೆಲ್‍ಗಳನ್ನು ಬಂದ್ ಮಾಡುವ ಉದ್ದೇಶವಿಲ್ಲ. ಆದರೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‍ಗಳ ಪೂರೈಕೆ ಕಡಿಮೆಯಾದರೆ ಬಹುತೇಕ ಹೋಟಲ್‍ಗಳನ್ನು ಬಂದ್ ಮಾಡುವ ಪರಿಸ್ಥಿತಿ ಬರಬಹುದು ಎಂದು ಅವರು ಹೇಳಿದರು.

ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇವೆ. ಒಟ್ಟು ಸಿಲಿಂಡರ್ ಪೂರೈಕೆಯಲ್ಲಿ ಹೋಟೆಲ್ ಉದ್ಯಮಕ್ಕೆ ಕನಿಷ್ಠ ಕೋಟಾ ನೀಡಬೇಕು ಎಂದು ಮನವಿ ಮಾಡುತ್ತೇವೆ. ಅವರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇದಕ್ಕಾಗಿ ದಿಲ್ಲಿಗೆ ಹೋಗಲು ಸಿದ್ಧತೆಯನ್ನೂ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

12 hours ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

12 hours ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

13 hours ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

13 hours ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

13 hours ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

13 hours ago