Featured

ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ : ಬಿ.ಸಿ. ಪಾಟೀಲ್‌ -Vishwanews24

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಹೊರಬರುವ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್‌ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರಿಸ್ಥಿತಿ ಹೀಗೆಯೇ ಮುಂದುವರೆಯುತ್ತದೆ. ಗುಂಡೂರಾವ್‌ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮೊದಲು ಒಂಬತ್ತು ಮಂದಿ ಸಂಸದರಿದ್ದರು, ಈಗ ಒಬ್ಬರೇ ಒಬ್ಬರು ಇದ್ದಾರೆ. ದಿನೇಶ್‌ ಗುಂಡೂರಾವ್‌ ಅವರಿಂದಲೇ ಮೈತ್ರಿ ಸರ್ಕಾರವೂ ಪತನವಾಯಿತು. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತಿತ್ತು ಎಂದು ಹೇಳಿದರು.

ದಿನೇಶ್‌ ಗುಂಡೂರಾವ್‌ ಅವರ ಕುರಿತು ಎಸ್‌.ಟಿ. ಸೋಮಶೇಖರ್‌ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಕಡೆ ವಾಲಬಾರದು. ಒಬ್ಬರಿಗೊಂದು, ಮತ್ತೊಬ್ಬರಿಗೊಂದು ರೀತಿಯಲ್ಲಿ ಮಾಡಬಾರದು. ಎಲ್ಲರನ್ನೂ ಸಮಾನ ಚಿತ್ತದಿಂದ ನೋಡಬೇಕು, ಜತೆಗೆ ಹೇಳಿದಂತೆ ನಡೆದುಕೊಳ್ಳಬೇಕು ಎಂದರು.

ಅನರ್ಹಗೊಂಡಿರುವ ಶಾಸಕರಿಗೆ ಟಿಕೆಟ್‌ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿರುವುದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

12 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

16 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

17 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago