ಬೆಂಗಳೂರು: ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಹೊರಬರುವ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರಿಸ್ಥಿತಿ ಹೀಗೆಯೇ ಮುಂದುವರೆಯುತ್ತದೆ. ಗುಂಡೂರಾವ್ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮೊದಲು ಒಂಬತ್ತು ಮಂದಿ ಸಂಸದರಿದ್ದರು, ಈಗ ಒಬ್ಬರೇ ಒಬ್ಬರು ಇದ್ದಾರೆ. ದಿನೇಶ್ ಗುಂಡೂರಾವ್ ಅವರಿಂದಲೇ ಮೈತ್ರಿ ಸರ್ಕಾರವೂ ಪತನವಾಯಿತು. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತಿತ್ತು ಎಂದು ಹೇಳಿದರು.
ದಿನೇಶ್ ಗುಂಡೂರಾವ್ ಅವರ ಕುರಿತು ಎಸ್.ಟಿ. ಸೋಮಶೇಖರ್ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಕಡೆ ವಾಲಬಾರದು. ಒಬ್ಬರಿಗೊಂದು, ಮತ್ತೊಬ್ಬರಿಗೊಂದು ರೀತಿಯಲ್ಲಿ ಮಾಡಬಾರದು. ಎಲ್ಲರನ್ನೂ ಸಮಾನ ಚಿತ್ತದಿಂದ ನೋಡಬೇಕು, ಜತೆಗೆ ಹೇಳಿದಂತೆ ನಡೆದುಕೊಳ್ಳಬೇಕು ಎಂದರು.
ಅನರ್ಹಗೊಂಡಿರುವ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿರುವುದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…