ದಿಯಾ’ ಸಿನಿಮಾದಿಂದ ಭಾರಿ ಯಶಸ್ಸು ಪಡೆದುಕೊಂಡ ನಟ ಪೃಥ್ವಿ ಅಂಬರ್. ಆ ಬಳಿಕ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಹರಿದುಬರಲು ಆರಂಭಿಸಿವೆ.
‘ದಿಯಾ’ ಚಿತ್ರದಲ್ಲಿ ‘Life is full of miracles and surprises’ ಎನ್ನುತ್ತಿದ್ದ ಪೃಥ್ವಿ ಈಗ ‘ಲೈಫ್ ಈಸ್ ಬ್ಯೂಟಿಫುಲ್’ ಎನ್ನುತ್ತಿದ್ದಾರೆ. ಯಾಕೆಂದರೆ, ಅವರ ಹೊಸ ಸಿನಿಮಾ ಹೆಸರು ಲೈಫ್ ಈಸ್ ಬ್ಯೂಟಿಫುಲ್! ಈ ಟೈಟಲ್ ಅನ್ನು ನಟ ಡಾಲಿ ಧನಂಜಯ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ‘ನೀವೆಲ್ಲರೂ ಕಾಯುತ್ತಿದ್ದ ಸರ್ಪ್ರೈಸ್ ಇಲ್ಲಿದೆ. ಪೃಥ್ವಿಯ ಹೊಸ ಸಿನಿಮಾ ಶೀರ್ಷಿಕೆ ಲಾಂಚ್ ಮಾಡಲು ಖುಷಿ ಎನಿಸುತ್ತಿದೆ. ಟೈಟಲ್ ರೀತಿಯೇ ಟೀಮ್ ಕೂಡ ಭರವಸೆ ಮೂಡಿಸುವಂತಿದೆ’ ಎಂದು ಧನಂಜಯ ಟ್ವೀಟ್ ಮಾಡಿದ್ದಾರೆ.
‘ಮಮ್ಮಿ’, ‘ದೇವಕಿ’ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಎಚ್. ಅವರು ಇತ್ತೀಚೆಗಷ್ಟೇ ಆರಂಭಿಸಿರುವ ‘ಫ್ರೈಡೇ ಫಿಲ್ಮ್ಸ್’ ಮತ್ತು ‘ಸಿಲ್ವರ್ ಟ್ರೇನ್ ಇಂಟರ್‌ನ್ಯಾಷನಲ್’ ಬ್ಯಾನರ್ ಮೂಲಕ ‘ಲೈಫ್ ಈಸ್ ಬ್ಯೂಟಿಫುಲ್’ ನಿರ್ಮಾಣ ಆಗಲಿದೆ. ನಿರ್ಮಾಪಕ ಕಿಶೋರ್ ನರಸಿಂಹಯ್ಯ ಬಂಡವಾಳ ಹೂಡುತ್ತಿದ್ದಾರೆ. ಅರುಣ್ ಕುಮಾರ್ ಮತ್ತು ಸಾಬು ಅಲೋಶಿಯಸ್ ಜೊತೆಯಾಗಿ ನಿರ್ದೇಶನ ಮಾಡಲಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ.
ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕರು ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರದ ಟೈಟಲ್ ಪೋಸ್ಟರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಈ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿ ಅವರ ಲುಕ್ ಹೇಗಿರಲಿದೆ ಎಂಬುದು ಇನ್ನೂ ರಿವೀಲ್ ಆಗಿಲ್ಲ. ಅವರಿಗೆ ಜೋಡಿಯಾಗಿ ಯಾರು ನಟಿಸುತ್ತಾರೆ? ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಯಾವೆಲ್ಲ ಕಲಾವಿದರು ಹಣ್ಣ ಹಚ್ಚಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ಗೊತ್ತಾಗಬೇಕಿದೆ. ಸೆಪ್ಟಂಬರ್ ತಿಂಗಳಿನಲ್ಲಿ ಶೂಟಿಂಗ್ ಅರಂಭಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…