Featured

ದೀದಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುವೆ : ಮೋದಿ -Vishwanews24

ಪುರುಲಿಯಾ:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಚುನಾವಣಾ ರ್ಯಾಲಿಯೊಂದರಲ್ಲಿ ಮಮತ ಬ್ಯಾನರ್ಜಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಮೋದಿಗೆ ಕಪಾಳಮೋಕ್ಷ ಮಾಡಬೇಕೆಂದು ಹೇಳಿದ್ದರು. ಇಂದು ಪಶ್ಚಿಮಬಂಗಳಾದ ಪುರುಲಿಯಾದಲ್ಲಿ ಪಕ್ಷದ ಪರ ಬಹಿರಂಗ ಪ್ರಚಾರ ನಡೆಸಿದ ವೇಳೆ ಮಮತ ಬ್ಯಾನರ್ಜಿಯ ಪ್ರತಿಯೊಂದು ಟೀಕೆಗೆ ಬಡ್ಡಿ ಚುಕ್ತ ಮಾಡಿದರು.

ದೀದಿ ಎನ್ನುತ್ತಲೇ ಭಾಷಣ ಆರಂಭಿಸಿದ ಅವರು, ಪ್ರಜಾಪ್ರಭುತ್ವಕ್ಕಾಗಿ ದೀದಿ ಅವರು ನನಗೆ ಕಪಾಳ ಮೋಕ್ಷ ಮಾಡುತ್ತಾರಂತೆ.ಇದರಿಂದ ನನಗೆ ಯಾವ ಬೇಸರವೂ ಇಲ್ಲ. ಹಾಗೊಂದು ವೇಳೆ ಅವರು ಕಪಾಳಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುವೆ.

ದೀದಿ ವೋ ದೀದಿ ನಾನು ನಿಮ್ಮನ್ನು ದೀದಿ ಎನ್ನುವೆ. ನಿಮ್ಮ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನಿಮ್ಮ ಹೇಳಿಕೆಯನ್ನು ಸ್ವೀಕರಿಸುತ್ತೇನೆ. ಆದರೆ ನನ್ನದೊಂದು ಬೇಡಿಕೆ ಇದೆ. ನೀವು ಕಪಾಳಮೋಕ್ಷ ಮಾಡುವ ಮೊದಲು ಶಾರದಾ ಚಿಟ್ ಫಂಡ್‍ನಲ್ಲಿ ಬಡವರ ಹಣ ತಿಂದುತೇಗಿರುವ ನಿಮ್ಮ ಸಹೋದ್ಯೋಗಿಗಳಿಗೆ ಕಪಾಳಮೋಕ್ಷ ಮಾಡುವ ತಾಕತ್ತು ನಿಮಗಿದೆಯೇ ಎಂದು ಪ್ರಶ್ನಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago