ದೀಪಾವಳಿಗೆ ಮಂಗಳೂರು-ಬೆಂಗಳೂರು ಹೆಚ್ಚುವರಿ ವಿಶೇಷ ರೈಲು : ಕ್ಯಾ. ಬ್ರಿಜೇಶ್ ಚೌಟ ಮನವಿ – vishwanews24

Featured, ದಕ್ಷಿಣ ಕನ್ನಡ

ದೀಪಾವಳಿಗೆ ಮಂಗಳೂರು-ಬೆಂಗಳೂರು ಹೆಚ್ಚುವರಿ ವಿಶೇಷ ರೈಲು : ಕ್ಯಾ. ಬ್ರಿಜೇಶ್ ಚೌಟ ಮನವಿ

ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು ಮತ್ತು ಬೆಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವಂತೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೇ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಪ್ರಧಾನ ವ್ಯವಸ್ಥಾಪಕ, ಮೈಸೂರು ವಿಭಾಗದ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಜಿಲ್ಲೆಯ ಸಾವಿರಾರು ಮಂದಿ ದೀಪಾವಳಿ ಹಬ್ಬ ಆಚರಿಸಲು ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಪ್ರಯಾಣಿಸುತ್ತಾರೆ. ಹಬ್ಬದ ಸಂದರ್ಭ ಸಾಮಾನ್ಯ ರೈಲು ಗಳಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಹೆಚ್ಚಾಗುವುದರಿಂದ ಬೇಡಿಕೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು – ಮಂಗಳೂರು ನಡುವೆ ಎರಡೂ ಕಡೆಗಳಿಂದ ವಿಶೇಷ ರೈಲು ಓಡಿಸಲು ಅನುಮತಿ ನೀಡಬೇಕು. ಮಂಗಳೂರು ಸೆಂಟ್ರಲ್ ಅಥವಾ ಮಂಗಳೂರು ಜಂಕ್ಷನ್‌ಗೆ ರೈಲುಗಳ ಸಂಚಾರ ಕಲ್ಪಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಹಬ್ಬದ ಸಂಭ್ರಮ ಉಜ್ವಲ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ: ಯೋಗಿ ಆದಿತ್ಯನಾಥ್  – vishwanews24

Leave a Reply