ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು ಮತ್ತು ಬೆಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವಂತೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೇ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.
ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಪ್ರಧಾನ ವ್ಯವಸ್ಥಾಪಕ, ಮೈಸೂರು ವಿಭಾಗದ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಜಿಲ್ಲೆಯ ಸಾವಿರಾರು ಮಂದಿ ದೀಪಾವಳಿ ಹಬ್ಬ ಆಚರಿಸಲು ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಪ್ರಯಾಣಿಸುತ್ತಾರೆ. ಹಬ್ಬದ ಸಂದರ್ಭ ಸಾಮಾನ್ಯ ರೈಲು ಗಳಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಹೆಚ್ಚಾಗುವುದರಿಂದ ಬೇಡಿಕೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು – ಮಂಗಳೂರು ನಡುವೆ ಎರಡೂ ಕಡೆಗಳಿಂದ ವಿಶೇಷ ರೈಲು ಓಡಿಸಲು ಅನುಮತಿ ನೀಡಬೇಕು. ಮಂಗಳೂರು ಸೆಂಟ್ರಲ್ ಅಥವಾ ಮಂಗಳೂರು ಜಂಕ್ಷನ್‌ಗೆ ರೈಲುಗಳ ಸಂಚಾರ ಕಲ್ಪಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ನ. 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ನಮ್ಮ ಮೆಟ್ರೋ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗ ಉದ್ಘಾಟನೆ ಬೆಂಗಳೂರು: ಪ್ರಧಾನಿ ನರೇಂದ್ರ…
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೇ ಎಚ್ಚರವಾಗಿರಿ.. ಗೃಹಲಕ್ಷ್ಮಿ ಯೋಜನೆಯ ಹೆಸರಲ್ಲಿ ಸಕ್ರಿಯವಾಗಿವೆ ಸೈಬರ್ ವಂಚನೆ ಜಾಲ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ನೆಪದಲ್ಲಿ…
ನಾನು ಸ್ಪರ್ಧಿಸಿದ್ದರೆ ಭರ್ಜರಿ ಭರ್ಜರಿ ಬಹುಮತದಿಂದ ಗೆಲ್ಲುತ್ತಿದ್ದೆ: ಟ್ರಂಪ್ ವಾಷಿಂಗ್ಟನ್: ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಮುನ್ನಡೆ ಸಾಧಿಸುತ್ತಿದೆ ಎಂಬ ಆರಂಭಿಕ…
ಮೀನು ಸಾಗಾಟ ವಾಹನಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ: 604 ಪ್ರಕರಣ ದಾಖಲು, ₹3.02 ಲಕ್ಷ ದಂಡ ವಸೂಲಿ ಮಂಗಳೂರು :…
ಕರ್ನಾಟಕದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ : 4 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ…
ಹಬ್ಬದ ಸಂಭ್ರಮ ಉಜ್ವಲ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ: ಯೋಗಿ ಆದಿತ್ಯನಾಥ್ ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ…