Featured

ದೀಪಾವಳಿ ಉಡುಗೊರೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು – vishwanews24

ದೀಪಾವಳಿ ಉಡುಗೊರೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು

ಮಂಗಳೂರು : ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ಎಸ್ ಎಂದಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುರ್ತು ಸ್ಪಂದಿಸಿದ್ದಾರೆ. ಇದೀಗ ನೈರುತ್ಯ ರೈಲ್ವೆಯು ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ. ಯಶವಂತಪುರ- ಮಂಗಳೂರು (06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು- ಯಶವಂತಪುರ (ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಾರೆ. ಆದರೆ, ಹಬ್ಬದ ಸೀಸನ್‌ನಲ್ಲಿ ಈಗಾಗಲೇ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್‌ ಗಳಲ್ಲಿ ಟಿಕೆಟ್ ಲಭ್ಯವಾಗದ ಹಲವರು ಊರಿಗೆ ಬರುವುದಕ್ಕೆ ಸಾಧ್ಯವಾಗದೆ ತೊಂದರೆಗೆ ಸಿಲುಕುತ್ತಾರೆ. ಹೀಗಾಗಿ, ದೀಪಾವಳಿ ಹಬ್ಬಕ್ಕೆ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ವಲಯಕ್ಕೆ ಹಾಗೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

1 hour ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

1 hour ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

2 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago