ಮಂಗಳೂರು : ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ಎಸ್ ಎಂದಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುರ್ತು ಸ್ಪಂದಿಸಿದ್ದಾರೆ. ಇದೀಗ ನೈರುತ್ಯ ರೈಲ್ವೆಯು ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ. ಯಶವಂತಪುರ- ಮಂಗಳೂರು (06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು- ಯಶವಂತಪುರ (ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಾರೆ. ಆದರೆ, ಹಬ್ಬದ ಸೀಸನ್‌ನಲ್ಲಿ ಈಗಾಗಲೇ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್ ಗಳಲ್ಲಿ ಟಿಕೆಟ್ ಲಭ್ಯವಾಗದ ಹಲವರು ಊರಿಗೆ ಬರುವುದಕ್ಕೆ ಸಾಧ್ಯವಾಗದೆ ತೊಂದರೆಗೆ ಸಿಲುಕುತ್ತಾರೆ. ಹೀಗಾಗಿ, ದೀಪಾವಳಿ ಹಬ್ಬಕ್ಕೆ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ವಲಯಕ್ಕೆ ಹಾಗೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…