ಯಾದಗಿರಿ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್‌ಗಳ ಮಾಲಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬಸ್ ಪರವಾನಗಿ ರದ್ದು ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರದೂರುಗಳಲ್ಲಿರುವವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ದತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವನ್ನು ಏಕಾಏಕಿ ಏರಿಕೆ ಮಾಡಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದಕ್ಕೆ ಬಸ್ ಮಾಲಕರು ಮುಂದಾದಲ್ಲಿ ಅಂತಹವರ ವಿರುದ್ದ ಕ್ರಮ ಅನಿವಾರ್ಯ. ಇದಕ್ಕಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಅಲ್ಲದೆ ಚೆಕ್‌ಪೋಸ್ಟ್‌ಗಳನ್ನು ಹೆಚ್ಚಿಸಿ ಬಸ್‌ಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.
ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಬಸ್ ಟಿಕೆಟ್ ದರ ಏರಿಸಿ ಹಲವು ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿಗಿಳಿದುವುದು ಗೊತ್ತಾಗಿದೆ. ಬೆಂಗಳೂರು-ಬಳ್ಳಾರಿ ನಡುವಿನ ಸಂಚಾರಕ್ಕೆ 1000 ರೂ-1500 ರೂ. ವರೆಗೆನಿಗದಿ ಮಾಡಿದ್ದಾರೆ. ಇನ್ನು ಅಕ್ಟೋಬರ್ 21ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರಕ್ಕಾಗಿ ಖಾಸಗಿ ಟ್ರಾವೆಲ್ಸ್‌ವೊಂದು 5,000 ರೂ. ದರ ನಿಗದಿಗೊಳಿಸಿದೆ. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಬಸ್ ಮಾಲಕರು ಕ್ಯಾರೇ ಎನ್ನದೆ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಸರ್ಕಾರಿಯಾಗಲೀ, ಖಾಸಗಿಯಾಗಲೀ ಯಾವುದೇ ಬಸ್‌ಗಳ ಟಿಕೆಟ್ ದರ ಏರಿಕೆ ಮಾಡುವಂತಿಲ್ಲ. ಯಥಾಸ್ಥಿತಿಯಲ್ಲೇ ದರ ಇರಬೇಕು. ಹೆಚ್ಚುವರಿ ವಸೂಲಿ ಮಾಡಿದರೆ ಅಂತಹವರ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…