Featured

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ – Vishwanews24

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ

ಯಾದಗಿರಿ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್‌ಗಳ ಮಾಲಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬಸ್ ಪರವಾನಗಿ ರದ್ದು ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರದೂರುಗಳಲ್ಲಿರುವವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ದತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವನ್ನು ಏಕಾಏಕಿ ಏರಿಕೆ ಮಾಡಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದಕ್ಕೆ ಬಸ್ ಮಾಲಕರು ಮುಂದಾದಲ್ಲಿ ಅಂತಹವರ ವಿರುದ್ದ ಕ್ರಮ ಅನಿವಾರ್ಯ. ಇದಕ್ಕಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಅಲ್ಲದೆ ಚೆಕ್‌ಪೋಸ್ಟ್‌ಗಳನ್ನು ಹೆಚ್ಚಿಸಿ ಬಸ್‌ಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.

ಸಂಸ್ಕೃತಿ ಬಗ್ಗೆ ಮಾತಾಡುವಷ್ಟು ಅರ್ಹತೆ ನನಗೆ ಇಲ್ಲ.. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’:ರಿಷಬ್ ಶೆಟ್ಟಿ – Vishwanews24

ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಬಸ್ ಟಿಕೆಟ್ ದರ ಏರಿಸಿ ಹಲವು ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿಗಿಳಿದುವುದು ಗೊತ್ತಾಗಿದೆ. ಬೆಂಗಳೂರು-ಬಳ್ಳಾರಿ ನಡುವಿನ ಸಂಚಾರಕ್ಕೆ 1000 ರೂ-1500 ರೂ. ವರೆಗೆನಿಗದಿ ಮಾಡಿದ್ದಾರೆ. ಇನ್ನು ಅಕ್ಟೋಬರ್ 21ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರಕ್ಕಾಗಿ ಖಾಸಗಿ ಟ್ರಾವೆಲ್ಸ್‌ವೊಂದು 5,000 ರೂ. ದರ ನಿಗದಿಗೊಳಿಸಿದೆ. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಬಸ್ ಮಾಲಕರು ಕ್ಯಾರೇ ಎನ್ನದೆ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಸರ್ಕಾರಿಯಾಗಲೀ, ಖಾಸಗಿಯಾಗಲೀ ಯಾವುದೇ ಬಸ್‌ಗಳ ಟಿಕೆಟ್ ದರ ಏರಿಕೆ ಮಾಡುವಂತಿಲ್ಲ. ಯಥಾಸ್ಥಿತಿಯಲ್ಲೇ ದರ ಇರಬೇಕು. ಹೆಚ್ಚುವರಿ ವಸೂಲಿ ಮಾಡಿದರೆ ಅಂತಹವರ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಿದರು.

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ವಂಚಕರ ತಂಡ ಕರಾವಳಿಯಲ್ಲಿ ಸಕ್ರಿಯ – ಎಚ್ಚರ – Vishwanews24

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago