ಬೆಂಗಳೂರು: ಮುಂದಿನ ವಾರ ನಡೆಯಲಿರುವ ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಹಸಿರು ಪಟಾಕಿಯ ವ್ಯಾಪಾರ ವಹಿವಾಟು ಮಾತ್ರ ನಡೆಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅವಕಾಶ ನೀಡಿದೆ. ಒಂದು ವೇಳೆ ಹಸಿರು ಪಟಾಕಿ ಹೊರತು ಪಡಿಸಿ ಅನ್ಯ ಪಟಾಕಿಗಳ ವ್ಯಾಪಾರ ವಹಿವಾಟು ನಡೆಸುವುದು ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಳ್ಳುವುದು ಎಂಬುದೂ ಸೇರಿದಂತೆ ಹಲವು ಸೂಚನೆಗಳನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನೀಡಿದೆ.
ದೀಪಾವಳಿ ಹಬ್ಬದ (ಅ.24ರಿಂದ ಅ.26) ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೆಷ್ಟುವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪಕ ಅಳವಡಿಸುವಂತೆ ಸೂಚಿಸಲಾಗಿದೆ.
ಮಂಗಳೂರು: ಹಲಾಲ್ ಮುಕ್ತ ದೀಪಾವಳಿ.. ಹಲಾಲ್ ಉತ್ಪನ್ನ ಬಹಿಷ್ಕರಿಸಲು ಹಿಂದೂ ಸಂಘಟನೆಗಳ ಕರೆ – Vishwanews24
ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಏರ್ಪಡಿಸಬೇಕು. ಪೊಲೀಸ್ ಇಲಾಖೆ ಪಟಾಕಿ ಸ್ಟಾಲ್‌ಗಳ ಮೇಲೆ ನಿಗಾ ಇಡಬೇಕು. ಪಟಾಕಿ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳನ್ನು ಸ್ಥಳೀಯ ಸಂಸ್ಥೆಗಳು ನಿಯೋಜಿಸಬೇಕು. ಪಟಾಕಿಗಳಿಂದಾಗುವ ಸಂಭಾವ್ಯ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆ ಸಿದ್ಧವಾಗಿರಬೇಕು. ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…