Featured

ದೀಪಾವಳಿ ಹಬ್ಬಕ್ಕೆ ಈ ವರ್ಷವೂ ದೆಹಲಿಯಲ್ಲಿ  ಪಟಾಕಿ ನಿಷೇಧ : ಅರವಿಂದ್‌ ಕೇಜ್ರಿವಾಲ್‌ -Vishwanews24

ದೀಪಾವಳಿ ಹಬ್ಬಕ್ಕೆ ಈ ವರ್ಷವೂ ದೆಹಲಿಯಲ್ಲಿ  ಪಟಾಕಿ ನಿಷೇಧ : ಅರವಿಂದ್‌ ಕೇಜ್ರಿವಾಲ್‌ -Vishwanews24

ನವದೆಹಲಿ : “ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ” ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು” ಎಂದಿದ್ದಾರೆ.

“ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು” ಎಂದು ತಿಳಿಸಿದ್ದಾರೆ.

“ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು” ಎಂದಿದ್ದಾರೆ.

“ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ” ಎಂದು ಹೇಳಿದ್ದಾರೆ.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago