ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.
ಹಬ್ಬದ ಹಿಂದಿನ ದಿನ ಖಾಸಗಿ ಬಸ್‌ಗಳ ಸೀಟ್‌ಗಳೆಲ್ಲಾ ಬಹುತೇಕ ಪುಲ್ ಆಗಿವೆ. ಕೆಲ ಬಸ್ಸಿನಲ್ಲಿ ಬೆರಳೆಣಿಕೆಯಷ್ಟು ಸೀಟುಗಳು ಮಾತ್ರ ಉಳಿದಿವೆ. ಇದರಿಂದಾಗಿ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರು ಪರದಾಡುವಂತಾಗಿದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಆಗಿರುವುದರಿಂದ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್‌ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.
ಇಂದಿನಿಂದಲೇ ಹಬ್ಬದವರೆಗೂ ವಿಶೇಷ ತನಿಖಾ ತಂಡಗಳನ್ನು ರಚಿಸಿ, ರಾಜ್ಯಾದ್ಯಂತ ಬಸ್‌ಗಳ ತಪಾಸಣೆ ನಡೆಸಲಿದೆ. ಜೊತೆಗೆ ದರ ಏರಿಕೆ ಮಾಡಿದ ಬಸ್‌ಗಳ ನೋಂದಣಿ ಅಮಾನತು ಮಾಡಲು ಮುಂದಾಗಿದೆ ಎಂದು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…