Featured

ದೀಪಾವಳಿ ಹಬ್ಬಕ್ಕೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ಅಮಾನತು: ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ – vishwnaews24

ದೀಪಾವಳಿ ಹಬ್ಬಕ್ಕೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ಅಮಾನತು: ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ  ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.

ಹಬ್ಬದ ಹಿಂದಿನ ದಿನ ಖಾಸಗಿ ಬಸ್‌ಗಳ ಸೀಟ್‌ಗಳೆಲ್ಲಾ ಬಹುತೇಕ ಪುಲ್ ಆಗಿವೆ. ಕೆಲ ಬಸ್ಸಿನಲ್ಲಿ ಬೆರಳೆಣಿಕೆಯಷ್ಟು ಸೀಟುಗಳು ಮಾತ್ರ ಉಳಿದಿವೆ. ಇದರಿಂದಾಗಿ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರು ಪರದಾಡುವಂತಾಗಿದೆ.

ನವೆಂಬರ್ 1 ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಆಗಿರುವುದರಿಂದ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್‌ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್‌ಗಳಿಗೆ  ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.

ಇಂದಿನಿಂದಲೇ ಹಬ್ಬದವರೆಗೂ ವಿಶೇಷ ತನಿಖಾ ತಂಡಗಳನ್ನು ರಚಿಸಿ, ರಾಜ್ಯಾದ್ಯಂತ ಬಸ್‌ಗಳ ತಪಾಸಣೆ ನಡೆಸಲಿದೆ. ಜೊತೆಗೆ ದರ ಏರಿಕೆ ಮಾಡಿದ ಬಸ್‌ಗಳ ನೋಂದಣಿ ಅಮಾನತು ಮಾಡಲು ಮುಂದಾಗಿದೆ ಎಂದು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

35 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

45 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

57 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago