‘ದೀಪಿಕಾ ಪಡುಕೋಣೆ ನನ್ನಂಥವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು : ಬಾಬಾ ರಾಮ್‌ದೇವ್ -Vishwanews24

ಇಂದೋರ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ದೇಶದ ಸಾಮಾಜಿಕ, ರಾಜಕೀಯ ವಿಷಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೀಪಿಕಾ ಪಡುಕೋಣೆ ನನ್ನಂಥವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು. ಅವರು ದೀಪಿಕಾಗೆ ಪ್ರಮುಖ ವಿಷಯಗಳ ಬಗ್ಗೆ ‘ಒಳನೋಟ’ದಿಂದ ಕೂಡಿದ ಮಾಹಿತಿ ನೀಡಬಲ್ಲರು’ ಎಂದು ಹೇಳಿದ್ದಾರೆ.

ದೀಪಿಕಾ ಪಡುಕೋಣೆ ಇತ್ತೀಚೆಗೆ ಜೆಎನ್‌ಯು ಹಿಂಸಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಭೇಟಿ ಮಾಡಿ ಮೌನವಾಗಿ ಪ್ರತಿಭಟನೆ ನಡೆಸಿದ್ದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ರಾಮ್‌ದೇವ್, ‘ದೀಪಿಕಾ ಪಡುಕೋಣೆ ದಕ್ಷ ನಟಿ ಎಂಬುದು ಬೇರೆ ಮಾತು. ಆದಾಗ್ಯೂ, ನಮ್ಮ ದೇಶದ ಬಗ್ಗೆ ಹೆಚ್ಚು ತಿಳಿಯುವ ನಿಟ್ಟಿನಲ್ಲಿ ಅವರು ಸಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಷಯಗಳ ಬಗ್ಗೆ ಹೆಚ್ಚು ಅಧ್ಯಯನ ಮಾಡಬೇಕು. ಅದಾದ ನಂತರವಷ್ಟೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ (ಸಿಎಎ) ಬೆಂಬಲ ಸೂಚಿಸಿರುವ ರಾಮ್‌ದೇವ್, ಸಿಎಎಯ ವಿಸ್ತೃತ ರೂಪ ತಿಳಿಯದವರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಶ್ಲೀಲ ಭಾಷೆ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago