ಇಂದೋರ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ದೇಶದ ಸಾಮಾಜಿಕ, ರಾಜಕೀಯ ವಿಷಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.
ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೀಪಿಕಾ ಪಡುಕೋಣೆ ನನ್ನಂಥವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು. ಅವರು ದೀಪಿಕಾಗೆ ಪ್ರಮುಖ ವಿಷಯಗಳ ಬಗ್ಗೆ ‘ಒಳನೋಟ’ದಿಂದ ಕೂಡಿದ ಮಾಹಿತಿ ನೀಡಬಲ್ಲರು’ ಎಂದು ಹೇಳಿದ್ದಾರೆ.
ದೀಪಿಕಾ ಪಡುಕೋಣೆ ಇತ್ತೀಚೆಗೆ ಜೆಎನ್‌ಯು ಹಿಂಸಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಭೇಟಿ ಮಾಡಿ ಮೌನವಾಗಿ ಪ್ರತಿಭಟನೆ ನಡೆಸಿದ್ದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ರಾಮ್‌ದೇವ್, ‘ದೀಪಿಕಾ ಪಡುಕೋಣೆ ದಕ್ಷ ನಟಿ ಎಂಬುದು ಬೇರೆ ಮಾತು. ಆದಾಗ್ಯೂ, ನಮ್ಮ ದೇಶದ ಬಗ್ಗೆ ಹೆಚ್ಚು ತಿಳಿಯುವ ನಿಟ್ಟಿನಲ್ಲಿ ಅವರು ಸಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಷಯಗಳ ಬಗ್ಗೆ ಹೆಚ್ಚು ಅಧ್ಯಯನ ಮಾಡಬೇಕು. ಅದಾದ ನಂತರವಷ್ಟೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ (ಸಿಎಎ) ಬೆಂಬಲ ಸೂಚಿಸಿರುವ ರಾಮ್‌ದೇವ್, ಸಿಎಎಯ ವಿಸ್ತೃತ ರೂಪ ತಿಳಿಯದವರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಶ್ಲೀಲ ಭಾಷೆ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…