ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು , ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ : ಡಿ.ಕೆ.ಶಿವಕುಮಾರ್ -Vishwanews24

ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.

ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.

ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago