ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ ತೆರಳುತ್ತಿದ್ದ ಬಸ್ ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.
ಘಟನೆಯಲ್ಲಿ ಸಾವನ್ನಪ್ಪಿರುವ 17 ಮಂದಿಯಲ್ಲಿ 8 ಜನ ಭಾರತೀಯರು ಎನ್ನಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದುಬೈನ ಭಾರತೀಯ ರಾಯಭಾರಿ ಘಟನೆಯಲ್ಲಿ ಸತ್ತವರ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆ ಕುರಿತು ದುಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು. ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ಮೃತ ಭಾರತೀಯರನ್ನು ರಾಜಗೋಪಾಲನ್, ಫೆರೋಜ್ ಖಾನ್ ಪಠಾಣ್, ರೇಶ್ಮಾ ಫೆರೊಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನ್ನಿ, ವಾಸುದೇವ್ ಮತ್ತು ತಿಲಕ್ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…