Featured

ದುಬೈನಲ್ಲಿ ಭೀಕರ ರಸ್ತೆ ಬಸ್‌ ಅಪಘಾತ : 8 ಭಾರತೀಯರು ಸೇರಿ 17 ಮಂದಿ ಸಾವು -Vishwanews24

ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ  ತೆರಳುತ್ತಿದ್ದ ಬಸ್  ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.

ಘಟನೆಯಲ್ಲಿ ಸಾವನ್ನಪ್ಪಿರುವ 17 ಮಂದಿಯಲ್ಲಿ 8 ಜನ ಭಾರತೀಯರು ಎನ್ನಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದುಬೈನ ಭಾರತೀಯ ರಾಯಭಾರಿ ಘಟನೆಯಲ್ಲಿ ಸತ್ತವರ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆ ಕುರಿತು ದುಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು. ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಮೃತ ಭಾರತೀಯರನ್ನು ರಾಜಗೋಪಾಲನ್, ಫೆರೋಜ್ ಖಾನ್ ಪಠಾಣ್, ರೇಶ್ಮಾ ಫೆರೊಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನ್ನಿ, ವಾಸುದೇವ್ ಮತ್ತು ತಿಲಕ್ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago