ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ.
ಮೃತರನ್ನು ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ:
ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೆಲವು ತಿಂಗಳುಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ಶ್ರೀಲತಾ ಅವರು ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…