Featured

ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಮಾತನಾಡಿ  ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  – vishwanews24

ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಮಾತನಾಡಿ  ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.

ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು. ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈಯಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು. ಅರಸೀಕೆರೆಯ 5 ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರ್ಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ವಿಜಯೇಂದ್ರ ಧೈರ್ಯ ತುಂಬಿದರು.

ತಂಡವು ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳುವಂತೆ ಕೋರುವುದಾಗಿ ತಿಳಿಸಿದರು. ಆತಂಕಗೊಳ್ಳದಿರಿ. ನೀವೆಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳಲು ಕೋರಲಿದ್ದೇನೆ ಎಂದು ಧೈರ್ಯ ಹೇಳಿದರು.

ಇದನ್ನೂ ಓದಿ: 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago