ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ ದುರ್ದೈವಿ.
ಮಹಮ್ಮದ್ ಅವರ ಪತ್ನಿ ದುಬೈನಲ್ಲಿರುವ ಮಗಳ ಬಳಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಗುರುವಾರ ದುಬೈಗೆ ತೆರಳಿ ಭಾನುವಾರ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.
ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಎಮಿಗ್ರೇಶನ್ ವಿಭಾಗದಲ್ಲಿ ನಿರ್ಗಮನದ ಸಹಿ ಹಾಕಲು ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ತಕ್ಷಣ ವಿಮಾನ ನಿಲ್ದಾಣದ ಆಯಂಬುಲೆನ್ಸ್ ಮೂಲಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮುಹಮ್ಮದ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಅವರ ಸಹೋದರಿಯ ಪತಿ ಶರೀಫ್ ಅವರು ಮಾಹಿತಿ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…