ದುಬೈಯಲ್ಲಿ ಭಾರೀ ಮಳೆ – ಮಹಾಮಳೆಗೆ ಮುಳುಗಿದ ಏರ್‌ಪೋರ್ಟ್‌ : ಜನಜೀವನ ಅಸ್ತವ್ಯಸ್ಥ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ದುಬೈಯಲ್ಲಿ ಭಾರೀ ಮಳೆ – ಮಹಾಮಳೆಗೆ ಮುಳುಗಿದ ಏರ್‌ಪೋರ್ಟ್‌ : ಜನಜೀವನ ಅಸ್ತವ್ಯಸ್ಥ

ದುಬೈ : ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ.

ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ಇಲ್ಲಿನ ವಿಮಾನ ನಿಲ್ದಾಣ ಜಲಾವೃತಗೊಂಡಿದ್ದು ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿತ್ತು. ನಗರದ ಪ್ರಮುಖ ರಸ್ತೆ, ಹೆದ್ದಾರಿಗಳು ಜಲಾವೃತಗೊಂಡಿದ್ದವು.

https://twitter.com/Brics_Dollar/status/1780463120151875704?ref_src=twsrc%5Etfw%7Ctwcamp%5Etweetembed%7Ctwterm%5E1780463120151875704%7Ctwgr%5E0444d0484f727f8643a16b916751ef2f8cef2bd3%7Ctwcon%5Es1_&ref_url=https%3A%2F%2Fthemangaloremirror.in%2Fdubai-rain-creates-flood%2F

 

ಭಾರೀ ಮಳೆಯಿಂದಾಗಿ ಸ್ಥಳೀಯ ಸರ್ಕಾರ ಮಂಗಳವಾರ ಜನರನ್ನು ತಮ್ಮ ಮನೆಗಳಲ್ಲಿ ಇರುವಂತೆ ಸೂಚನೆ ನೀಡಿತ್ತು. ಶಾಲೆ, ಕಾಲೇಜುಗಳಿಗೆ ಆನ್‌ಲೈನ್‌ ತರಗತಿ ನಡೆಸುವಂತೆ ಹಾಗೂ ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ನೌಕರರು ಮನೆಯಲ್ಲೇ ಕೆಲಸ ಮಾಡುವಂತೆ ಸೂಚನೆ ನೀಡಿತ್ತು.

 

ದುಬೈ, ಅಬುಧಾಬಿ, ಶಾರ್ಜಾ, ಕತಾರ್, ಸೌದಿ ಅರೇಬಿಯಾದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ದ್ವಾರಕೀಶ್‌ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ – Vishwanews24

Leave a Reply