ದುಬೈಯಿಂದ ಬಂದ ಕೊರೋನಾ ಶಂಕಿತ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಿಂದ ಎಸ್ಕೇಪ್..! Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ; ಮಹಾಮಾರಿ ಕೊರೋನಾ ವೈರಸ್ ತಗುಲಿ ವಿಶ್ವಾದ್ಯಂತ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಈ ನಡುವೆ ದುಬೈಯಿಂದ ಮಂಗಳೂರಿಗೆ ಅಗಮಿಸಿದ ಪ್ರಯಾಣಿಕನಲ್ಲಿ ಕೊರೋನಾ ಸೋಂಕು ತಗುಲಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅತನನ್ನು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ತಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗಮಿಸುವ ಎಲ್ಲಾ ಪ್ರಯಾಣಿಕರನ್ನು ಅರೋಗ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದ್ದ ವೇಳೆ ದುಬೈಯಿನಿಂದ ಅಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿತ್ತು ಎನ್ನಲಾಗಿದ್ದು ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂಬ ಮಾಹಿತಿ ದೊರಕಿದೆ.

ಈತ ಉಳ್ಳಾಲದ ವ್ಯಕ್ತಿ ಎಂದು ಗೊತ್ತಾಗಿದ್ದು ಆತನ ಪತ್ತೆಗಾಗಿ ಕಾರ್ಯಾಚರಣೆ ಆರಂಭಗೊಂಡಿದೆ.