ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಶಾರ್ಜಾದಲ್ಲಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಪ್ರಕಾಶ್ ಅವರು ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರನೊಂದಿಗೆ ಶಾರ್ಜಾದಲ್ಲಿ ನೆಲೆಸಿದ್ದರು. ಶಾರ್ಜಾ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ಜುಲೈ 20ರ ಸುಮಾರಿಗೆ ಸಹೋದರ ಪ್ರಶಾಂತ್ ಕುಂದರ್ ಅವರನ್ನು ಸಂಪರ್ಕಿಸಲು ಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಪ್ರಕಾಶ್, ಈ ಬಾರಿ ಟೆಕ್ಸ್ಟ್ ಮೆಸೇಜ್ ಮೂಲಕ ಮಾತ್ರ ಪ್ರತಿಕ್ರಿಯಿಸಿದ್ದು, ಕರೆ ಮಾಡುವಂತೆ ಸಹೋದರ ಒತ್ತಾಯಿಸಿದ ಬಳಿಕ ಸಂಪರ್ಕ ಕಡಿತಗೊಂಡಿತ್ತು.
ಇದರಿಂದ ಆತಂಕಗೊಂಡ ಸಂಬಂಧಿಕರು ವಿಚಾರಿಸಿದಾಗ, ಪ್ರಕಾಶ್ ಭಾರತಕ್ಕೆ ತೆರಳಿರುವುದಾಗಿ ಅವರು ಕೆಲಸ ಮಾಡುತ್ತಿದ್ದ ಕಂಪನಿಯಿಂದ ಮಾಹಿತಿ ದೊರೆತಿತ್ತು. ಆದರೆ ಪ್ರಕಾಶ್ ಭಾರತಕ್ಕೆ ಬಂದಿರುವ ಯಾವುದೇ ಮಾಹಿತಿ ಕುಟುಂಬಕ್ಕೆ ಲಭ್ಯವಾಗದ ಹಿನ್ನೆಲೆಯಲ್ಲಿ ಶಾರ್ಜಾದಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ಹುಡುಕಾಟ ಆರಂಭಿಸಿದ್ದರು.
ಹುಡುಕಾಟದ ವೇಳೆ ಪ್ರಕಾಶ್ ಅವರದೇ ಕಾರಿನಲ್ಲಿ ಶವ ಪತ್ತೆಯಾಗಿದ್ದು, ದೇಹಕ್ಕೆ ಇರಿತದ ಗಾಯಗಳಾಗಿದ್ದವು. ಶವವನ್ನು ಹಲವು ತುಂಡುಗಳಾಗಿ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣದಲ್ಲಿ ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣದ ನಿಖರ ಕಾರಣ ಹಾಗೂ ಆರೋಪಿಗಳ ಬಗ್ಗೆ ಶಾರ್ಜಾ ಪೊಲೀಸರ ತನಿಖೆಯಿಂದಲೇ ಸ್ಪಷ್ಟತೆ ದೊರೆಯಬೇಕಿದೆ.
ಪ್ರಕಾಶ್ ಹಾಗೂ ಟೀನಾ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಟೀನಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪುತ್ರ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಾನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಕಾಶ್ ಭಾರತಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಕುಟುಂಬ ಕಲಹದ ಬಗ್ಗೆ ಸಂಬಂಧಿಕರಿಗೆ ಯಾವುದೇ ಮಾಹಿತಿ ಇರಲಿಲ್ಲ. ಸದ್ಯ ಪ್ರಕಾಶ್ ಅವರ ಮೃತದೇಹವನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಭಾರತಕ್ಕೆ ತರಲಾಗುವುದು. ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ.
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…