Featured

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ – Vishwanews24

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ

ದುಬೈ : ಕಳೆದ ವರ್ಷ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮಾವೇಶವನ್ನು ಆಯೋಜಿಸಿದ್ದ ಯುಎಇ ಕಳೆದ 75 ವರ್ಷಗಳಲ್ಲೇ ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. ದುಬೈಯಲ್ಲಿ ಸಾಮಾನ್ಯವಾಗಿ ಒಂದೂವರೆ ವರ್ಷದ ಅವಧಿಯಲ್ಲಿ ಸುರಿಯುವ ಮಳೆ ಒಂದೇ ದಿನದಲ್ಲಿ ಸುರಿದಿದೆ ಎಂದು ಸರಕಾರ ಹೇಳಿದೆ.

ಕಳೆದ 75 ವರ್ಷಗಳಲ್ಲೇ ದಾಖಲೆ ಮಳೆಗೆ ಯುಎಇ ಸಾಕ್ಷಿಯಾಗಿದೆ. ಅಲ್‍ಐನ್ ನಗರದಲ್ಲಿರುವ ಖತ್ಮ್-ಅಲ್ ಪ್ರದೇಶದಲ್ಲಿ 24 ಗಂಟೆಗೂ ಕಡಿಮೆ ಅವಧಿಯಲ್ಲಿ 254.8 ಮಿ.ಮೀ ಮಳೆಯಾಗಿದ್ದು ದೇಶದ ಹವಾಮಾನ ಇತಿಹಾಸದಲ್ಲೇ ಅಸಾಧಾರಣ ವಿದ್ಯಮಾನ ಇದಾಗಿದೆ. ದುಬೈಯಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದ್ದು 1.5 ವರ್ಷ ಸುರಿಯುವ ಮಳೆ ಒಂದೇ ದಿನ ಸುರಿದಿದೆ. 24 ಗಂಟೆಗಳಲ್ಲಿ ಸುಮಾರು 5 ಇಂಚಿನಷ್ಟು ಮಳೆಯಾಗಿದೆ ‘ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ (ಎನ್‍ಸಿಎಂ) ಟ್ವೀಟ್(ಎಕ್ಸ್) ಮಾಡಿದೆ. ಯುಎಇಯ 7 ಎಮಿರೇಟ್ಸ್‍ಗಳಲ್ಲಿ ಒಂದಾಗಿರುವ ದುಬೈನಲ್ಲಿರುವ ಮಾಲ್‍ಗಳು, ವಿಮಾನ ನಿಲ್ದಾಣಗಳು ಜಲಾವೃತಗೊಂಡಿವೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಹದ ಕಾರಣದಿಂದ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ತೀರಾ ಅಗತ್ಯವಿದ್ದರೆ ಮಾತ್ರ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. ದುಬೈನ ಪ್ರಮುಖ ಮಾಲ್‍ಗಳಾದ ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡರಲ್ಲೂ ನೀರು ನುಗ್ಗಿದ್ದರಿಂದ ಸಮಸ್ಯೆಯಾಗಿದೆ. ಮೆಟ್ರೋ ನಿಲ್ದಾಣಗಳಲ್ಲೂ ಮೊಣಕಾಲು ಮಟ್ಟದಲ್ಲಿ ನೀರು ನಿಂತಿದೆ.

ಯುಎಇಯ ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ದುಬೈಯಲ್ಲಿ ಪ್ರವಾಹದಂತಹ ಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ದುಬೈಯಲ್ಲಿರುವ ಭಾರತೀಯ ಕಾನ್ಸುಲೇಟ್ ಭಾರತೀಯ ಪ್ರಜೆಗಳಿಗೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. (+971501205172, +971569950590, +971507347676, +971585754213).

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago