ದುಬೈ,: ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಅದರ ಜೊತೆ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.
ಸ್ಯಾಂಡಲ್‌ವುಡ್ ಬಾದ್‌ಶಾ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾದಲ್ಲಿ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಮಾಡಲಾಗಿದೆ. ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ.
ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಬಿಡುಗಡೆಯಾಗಿದ್ದು, ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಪ್ರಕಟಿಸಿದ್ದಾರೆ.
ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…