ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.
ತಿರುಚಿರಾಪಳ್ಳಿಯಿಂದ ಮಂಗಳೂರು ಮಾರ್ಗದ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪನಿಗೆ ಸೇರಿದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ಫ್ಲೈಟ್ ನಂಬರ್ 814, ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 813, ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನ 384 ಮತ್ತು ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಗುರುವಾರವೂ ರದ್ದುಗೊಳಿಸಲಾಗಿದೆ. ಜೆಡ್ಡಾದಿಂದ ಮಂಗಳೂರಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 796 ಮತ್ತು ಮಂಗಳೂರಿನಿಂದ ತಿರುಚಿರಾಪಳ್ಳಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೂಡಾ ವಿಳಂಬವಾಗಲಿದೆ.
ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…