ದುಬೈ: ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್‌ನ್ಯಾಶನಲ್ ವರ್ಲ್ಡ್ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಬುಧವಾರ ದುಬೈಯಲ್ಲಿ ಸ್ವೀಕರಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೈಲ್ ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆ ನೀಡುತ್ತಿದೆ.
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಜೊತೆಗೆ ಅದ್ಭುತ ಸಾಧನೆಗೈದಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಮೈಲ್ ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಪ್ರಿನ್ಸ್ ಸುಹೇಲ್ ಮೊಹಮ್ಮದ್ ಅಲ್ ಝರೂನಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಮಲಿಕ್, ನವದೆಹಲಿಯ ಅರ್ಥಶಾಸ್ತ್ರಜ್ಞ ರಾಜೇಂದ್ರ ಕುಮಾರ್ ರಾಜ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಹಾಗೂ ಜಯಪ್ರಕಾಶ್ ತುಂಬೆ ಪಾಲ್ಗೊಂಡಿದ್ದರು.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…