Featured

ದುಬೈ ರಸ್ತೆ ಅಪಘಾತ –  ಉಳ್ಳಾಲದ ಯುವತಿ ದಾರುಣ ಸಾವು – Vishwanews24

ದುಬೈ ರಸ್ತೆ ಅಪಘಾತ –  ಉಳ್ಳಾಲದ ಯುವತಿ ದಾರುಣ ಸಾವು

ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ.

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ ಆ್ಯಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.

ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದ್ದು ವಿಧಿಯ ಕ್ರೂಟ ಆಟಕ್ಕೆ ವಿದಿಶಾ ಬಲಿಯಾಗಿದ್ದಾಳೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

36 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago