ನವದೆಹಲಿ : ದೇಶದ ಬೆನ್ನೆಲುಬು ರೈತ ಅವರ ಅಳಲನ್ನು ಆಲಿಸುವುದು ಸರ್ಕಾರದ ಕೆಲಸ ಎಂದು ರಾಗಾ ಮೋದಿಗೆ ಸಲಹೆ ನೀಡಿದ್ದಾರೆ. ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರೈತರ ಕಠಿಣ ಪರಿಶ್ರಮಕ್ಕಾಗಿ ನಾವೆಲ್ಲರೂ ಋಣಿಯಾಗಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ” ಎಂದಿದ್ದಾರೆ.
“ರೈತರು ರಸ್ತೆ, ಹೊಲಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ಕೂಡಾ ರೈತರ ಕಠಿಣ ಪರಿಶ್ರಮಕ್ಕೆ ಋಣಿಯಾಗಿದ್ದೇವೆ. ನ್ಯಾಯ ಸಲ್ಲಿಸುವ ಮೂಲಕ ನಾವು ಅವರ ಋಣವನ್ನು ತೀರಿಸಬೇಕು. ಇದರ ಬದಲಾಗಿ ಅವರಿಗೆ ಲಾಠಿಯಿಂದ ಹೊಡೆದು, ಆಶ್ರುವಾಯು ಬಳಸುವ ಮೂಲಕ ಅವರ ಮೇಲೆ ದೌರ್ಜನ್ಯವೆಸಗುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.
“ಮೊದಲು ಎಚ್ಚರಗೊಂಡು ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ” ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕೆಲವು ದಿನಗಳಿಂದ ನೂರಾರು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…