Featured

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ಹಾಸನ: ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕು ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಈ ಮೂಲಕ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ಳುತ್ತಾರೆ ಎಂಬ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಗುರುವಾರ ಮಾತನಾಡಿದ ಅವರು, ಶತ್ರುಗಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಮಾಟ ಮಂತ್ರ ಮಾಡ್ತಾರಲ್ಲಾ ಅವುಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕಲ್ವಾ, ಅದಕ್ಕೆ ನಾನು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಹೇಳಿದರು.

ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರೇ ನಿಂಬೆಹಣ್ಣು ಇಟ್ಟುಕೊಂಡಿದ್ದಾರೆ. ಅಂತದ್ರಲ್ಲಿ ನಾನು ನಿಂಬೆಹಣ್ಣು ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಹಾಸನದ ವಿಮಾನ ನಿಲ್ದಾಣವನ್ನು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಜನರನ್ನು ಬಿಜೆಪಿಯವರು ಮತ ಕೇಳುತ್ತಾರೆ. ವ್ಯಾಪಾರ ಮಾಡುವಂತೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಹಾಸನ-ಬೇಲೂರು ರಸ್ತೆಗೆ ಅನುಮೋದನೆ ನೀಡಿ 800 ಕೋಟಿ ರೂ. ಹಣವನ್ನು ಸಮ್ಮಿಶ್ರ ಸರಕಾರದಲ್ಲಿ ಬಿಡುಗಡೆ ಮಾಡಿದ್ದೇವು. ಆದರೆ, ಬಿಳಿಕೆರೆಯಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಸರ್ಕಾರ ರದ್ದು ಮಾಡಿದೆ ಎಂದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago