ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ -Vishwanews24

ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ ಸಮಾಜದ ವಿವಿಧ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಸಮಾಜದಲ್ಲಿ ಸೌಹಾರ್ದ ನೆಲೆಸಬೇಕು, ಸಮಾಜದಲ್ಲಿ ಪ್ರತಿ ಜಾತಿಪ್ರತಿ ಧರ್ಮದವರು ಒಗ್ಗಟ್ಟಿನಲ್ಲಿ ಇರಬೇಕು, ಭವಿಷ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎಂಬ ನಿಟ್ಟಿನಲ್ಲಿ ರಾಜಕೀಯ ರಹಿತವಾಗಿ ಎಲ್ಲಾ ಪಕ್ಷಗಳ ಬಿಲ್ಲವ ಮುಖಂಡರು ಸೇರಿ ಮಾಡಿದ ನಿರ್ಣಯದ ಪ್ರಕಾರ ಬಿಲ್ಲವ ಮುಸ್ಲಿಂ ಸಾಮರಸ್ಯ ಸಮಾವೇಶದ ಆಯೋಜನೆ ಮಾಡಲಾಗಿದ್ದು ಇದರ ವಿರುದ್ಧ ಕೆಲವು ಸ್ಥಾಪಿತ ಹಿತಾಸಕ್ತಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಮೊಬೈಲ್‍ನಲ್ಲಿ ಅವಾಚ್ಯ ಶಬ್ದಗಳ ಮೂಲಕ ನಿಂದಿಸಿ ಮತ್ತು ಅವರಿಗೆ ಜೀವ ಬೆದರಿಕೆ ಹಾಕಿರುವುದು ಖಂಡನೀಯ ಹಾಗೂ ಇದೊಂದು ಹೇಡಿತನದ ಪರಮಾವಧಿ.

ಸುಸಂಸ್ಕತ ಸಮಾಜದಲ್ಲಿ ಮರ್ಯಾದೆಯಿಂದ, ನಾರಾಯಣ ಗುರುಗಳ ತತ್ವವನ್ನು ಅಳವಡಿಸಿಕೊಂಡು, ಕೋಟಿ ಚೆನ್ನಯರ ಸತ್ಯವನ್ನು ಪಾಲಿಸಿಕೊಂಡು ತಮ್ಮ ಜೀವನ ನಡೆಸುವ ಬಿಲ್ಲವರ ಒಗ್ಗಟ್ಟನ್ನು ಮುರಿದು ಸಮಾಜದಲ್ಲಿ ಅಶಾಂತಿಯನ್ನು ಹರಡುವ ಶಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ ಹಾಗೂ ಮುಂದಿನ ದಿನಗಳಲ್ಲಿ ಈ ಷಡ್ಯಂತ್ರ ಮಾಡುವ ಶಕ್ತಿಗಳು ಇದರ ಪರಿಣಾಮನ್ನು ಎದುರಿಸಲಿದ್ದಾರೆ ಎಂದು ಸದಾಶಿವ ಅಮೀನ್‍ಕಟ್ಟೆಗುಡ್ಡೆ, ಪ್ರಶಾಂತ್ ಪೂಜಾರಿ, ಸಾಯಿರಾಜ್ ಪೂಜಾರಿ, ತಾರಾನಾಥ ಸುವರ್ಣ, ಗಿರೀಶ್‍ಕುಮಾರ್ , ದಿವಾಕರ ಬೊಳ್ಜೆ, ಶೇಖರ್ ಕೋಟ್ಯಾನ್, ಚರಣ್ ವಿಠಲ್ ಕುದಿ, ಲಕ್ಷ್ಮಣ ಪೂಜಾರಿ, ದಿನೇಶ್ ಜತ್ತನ್, ಆನಂದ ಬಂಗೇರ, ಶಬರೀಶ್ ಪೂಜಾರಿ, ಮಲ್ಲಿಕಾ ಪೂಜಾರಿ, ಅಂಚನ್, ಭಾಸ್ಕರ್ ಕೋಟ್ಯಾನ್, ಮಿಥುನ್ ಅಮೀನ್, ಆರ್. ಕೆ. ರಮೇಶ್ ಪೂಜಾರಿ, ರಾಜೇಶ್ ಪಾಲನ್, ಧನ್‍ಪಾಲ್, ಸುಪ್ರೀತ್ ಸುವರ್ಣ, ವಿಜಯ ಪೂಜಾರಿ, ಸುರೇಂದ್ರ ಪೂಜಾರಿ ಮೊದಲಾದವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago